ನವದೆಹಲಿ: ಜನಸಂಖ್ಯಾ ನಿಯಂತ್ರಣ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಹೇಳಿಕೆಗಳು ಆಗಾಗ ಮುನ್ನೆಲೆಗೆ ಬರುತ್ತಿವೆ. ಕೇಂದ್ರ ಸಚಿವರೂ ಆಗಿರವ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಕೂಡ ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯಾ ನಿಯಂತ್ರಣ ಮಸೂದೆ ಬಗ್ಗೆ ಅವರು ಮತ್ತೊಮ್ಮೆ ದನಿ ಎತ್ತಿದ್ದು,
ಭಾರತದಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯಾ ನಿಯಂತ್ರಣ ಮಸೂದೆ ನಿರ್ಣಾಯಕವಾಗಿದೆ ಎಂದಿದ್ದಾರೆ. ನಮ್ಮಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯೆ ನಿಯಂತ್ರಿಸುವುದು ಅವಶ್ಯಕವಾಗಿದೆ. ಭಾರತವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ, ಈ ಬಗ್ಗೆ ಕಾನೂನು ರೂಪಿಸಬೇಕು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.

