16 ಆವೃತ್ತಿ ಕಳೆದರೂ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಒಮ್ಮೆಯೂ ಟ್ರೋಫಿ ಎತ್ತಿಹಿಡಿಯದ ಆರ್ಸಿಬಿ ಪುರುಷರ ತಂಡಕ್ಕೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ (RCB Womens) ಮಾದರಿಯಾಗಿದೆ. ಮಹಿಳಾ ಪ್ರೀಮಿಯರ್ ಲೀಗ್ನ (WPL 2024) 2ನೇ ಆವೃತ್ತಿಯಲ್ಲೇ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದು, ಹೆಣ್ಮಕ್ಕಳೇ ಸ್ಟ್ರಾಂಗು ಗುರು ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.
ಕಳೆದ 16 ಆವೃತ್ತಿಗಳಿಂದ ಪುರುಷರ ತಂಡವನ್ನು ಪ್ರೋತ್ಸಾಹಿಸುತ್ತಾ ಬರುತ್ತಿದ್ದ ಅಭಿಮಾನಿಗಳಂತೂ ಮಹಿಳಾ ತಂಡದ ಗೆಲುವನ್ನು ಹೆಮ್ಮೆಯಿಂದ ಕೊಂಡಾಡಿದರು. ಕೊನೆಯ ರನ್ ಸಿಡಿಸುತ್ತಿದ್ದಂತೆ ಅಭಿಮಾನಿಗಳು ಮಹಿಳಾಮಣಿಗಳು ಮೈದಾನದಲ್ಲೇ ಕುಣಿದು ಕುಪ್ಪಳಿಸಿದರು. ಆರ್ಸಿಬಿ ಪರ ಹರ್ಷೋದ್ಘಾರ ಕೂಗುತ್ತಾ ಗೆಲುವಿನ ಕೇಕೆ ಹಾಕಿದರು. ಆದ್ರೆ ಚೊಚ್ಚಲ ಆವೃತ್ತಿಯ ಫೈನಲ್ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಬಾರಿಯೂ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
https://ainlivenews.com/wpl-2024-mumbai-skipper-explains-the-reason-for-defeat-against-rcb/
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.3 ಓವರ್ಗಲ್ಲಿ 113 ರನ್ ಗಳಿಗೆ ಆಲೌಟ್ ಆಯಿತು. 114 ರನ್ಗಳ ಗುರಿ ಬೆನ್ನತ್ತಿದ ಆರ್ಸಿಬಿ 19.3 ಓವರ್ಗಳಲ್ಲೇ 2 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಗೆಲುವು ಸಾಧಿಸಿತು.
ಆರ್ಸಿಬಿಗೆ ಟರ್ನಿಂಗ್ ಸಿಕ್ಕಿದ್ದೆಲ್ಲಿ?
ಪವರ್ಪ್ಲೇ ನಲ್ಲಿ ಕಳಪೆ ಬೌಲಿಂಗ್ ಹಾಗೂ ಫೀಲ್ಡಿಂಗ್ ಪ್ರದರ್ಶನದಿಂದಾಗಿ 6 ಓವರ್ಗಳಲ್ಲಿ 61 ರನ್ ಚಚ್ಚಿಸಿಕೊಂಡಿದ್ದ ಆರ್ಸಿಬಿ, ನಂತರ ಡೆಲ್ಲಿ ಆಟಕ್ಕೆ ಬ್ರೇಕ್ ಹಾಕಿತು. 8ನೇ ಓವರ್ನಲ್ಲಿ ಬೌಲಿಂಗ್ಗೆ ಇಳಿದ ಸೋಫಿ ಮೊಲಿನೆಕ್ಸ್ ಮೊದಲ 4 ಎಸೆತಗಳಲ್ಲೇ ಅಗ್ರ ಕ್ರಮಾಂಕದ 3 ವಿಕೆಟ್ (ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್, ಅಲಿಸ್ ಕ್ಯಾಪ್ಸಿ) ಉರುಳಿಸಿ, ಕೇವಲ 1 ರನ್ ಬಿಟ್ಟುಕೊಟ್ಟರು. ಇದರಿಂದ 7 ಓವರ್ಗಳಲ್ಲಿ 64 ರನ್ ಗಳಿಸಿದ್ದ ಡೆಲ್ಲಿ ತಂಡ 81 ರನ್ ಗಳಿಸುವ ವೇಳೆಗೆ ಕೇವಲ 17 ರನ್ಗಳ ಅಂತರದಲ್ಲೇ ಪ್ರಮುಖ 6 ವಿಕೆಟ್ ಕಳೆದುಕೊಂಡಿತ್ತು. ಇದು ಆರ್ಸಿಬಿಗೆ ಬಹುದೊಡ್ಡ ಲಾಭವಾಯಿತು. ಅಲ್ಲಿಂದ ಒಂದೊಂದು ರನ್ ಕದಿಯುವುದಕ್ಕೂ ಹೆಣಗಾಡುತ್ತಿದ್ದ ಡೆಲ್ಲಿ ತಂಡ ವಿಕೆಟ್ಗಳನ್ನು 113 ರನ್ಗಳಿಗೆ ಆಲೌಟ್ ಆಯಿತು.