ಬೆಂಗಳೂರು/ಹಾಸನ:– ನನಗೊಂದು ಅವಕಾಶ ಕೊಡಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ.
ನೀರಿನ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡ್ತಾರಂತೆ “ದಿ ರಾಕ್”.. ಇದೆಂಥಾ ಅಸಭ್ಯ ವರ್ತನೆ..!
ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ.
ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್ನ ಬಗ್ಗೆ ವಿಷಯ ತಿಳಿಸಲಾಗಿದೆ.
ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)