ಹುಬ್ಬಳ್ಳಿ:- ಖಾಸಗಿ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಗೆ ಕಠೋರ ಶಿಕ್ಷೆ ನೀಡಿ, ನಮ್ಮ ಬೆಂಬಲ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಪ್ರೀತಿಯ ಹುಚ್ಚಾಟ: ಪ್ರಿಯತಮೆ ಜೊತೆ ಚಾಟ್ ಮಾಡಿದ ಯುವಕನ ಕೈ ಕಟ್ ಮಾಡಿದ ಪಾಗಲ್ ಪ್ರೇಮಿ..!
ಮಹಿಳೆಯರ ಮೇಲೆ ದೌರ್ಜನ್ಯವೆಸಗಿದವರ ನಾವು ಇರುವುದಿಲ್ಲ. ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಪ್ರಜ್ವಲ್ ರೇವಣ್ಣನ ಪೆನ್ಡ್ರೈವ್ ಬಂತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಯಾಕೆ ಕ್ರಮಕೈಗೊಳ್ಳಲಿಲ್ಲ. ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದು, ಇಂತಹ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ನಿಮಗೆ ಆಗದಿದ್ದಲ್ಲಿ ಹೇಳಿ ಕರ್ನಾಟಕವನ್ನು ನಾವು ಸುರಕ್ಷಿತವಾಗಿ ಇಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣ ಪ್ರಸ್ತಾಪಿಸಿದ ಅಮಿತ್ ಶಾ, ಏ.18ರಂದು ನೇಹಾಗೆ ಚಾಕುವಿನಿಂದ ಇರಿದು ಕೊಂದಿದ್ದ ಫಯಾಜ್. ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)