ಭಾರತದ ವಿರುದ್ಧದ ಹೇಳಿಕೆ ನಿಲ್ಲಿಸಿ, ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಿ ಎಂದು ಪಿಸಿಬಿಗೆ ಐಸಿಸಿ ತಾಕೀತು ಮಾಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ರಂಪ ಮುಂದುವರೆದಿದೆ. ಒಂದೆಡೆ ಭಾರತ ಪಾಕ್ನಲ್ಲಿ ಟೂರ್ನಿ ಆಡಲು ನಿರಾಕರಿಸಿದರೆ, ಮತ್ತೊಂದೆಡೆ ಪಾಕಿಸ್ತಾನ್ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಹಿಂದೇಟು ಹಾಕಿದೆ. ಈ ಎರಡು ಕ್ರಿಕೆಟ್ ಮಂಡಳಿಗಳ ನಿರ್ಧಾರದಿಂದ ಇದೀಗ ಐಸಿಸಿ ಸಂಕಷ್ಟಕ್ಕೆ ಸಿಲುಕಿದೆ.
ಇಂದು ಮಹಾರಾಷ್ಟ್ರ ಎಲೆಕ್ಷನ್ ಗೆ ಮತದಾನ, ಜಾರ್ಖಂಡ್ನಲ್ಲಿ ಕಡೇ ಹಂತದ ವೋಟಿಂಗ್!
ಪಾಕಿಸ್ತಾನದಲ್ಲೇ ಟೂರ್ನಿ ಆಯೋಜಿಸಲು ಅನುವು ಮಾಡಿಕೊಡುವುದಾಗಿ ತಿಳಿಸಿರುವ ಐಸಿಸಿ, ಭಾರತಕ್ಕಾಗಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಳ್ಳಲೇಬೇಕು ಎಂದು ತಿಳಿಸಿದೆ.
ಐಸಿಸಿ ಅಧಿಕಾರಿಗಳು ಮುಂದಿನ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ. ಅಲ್ಲದೆ ಭಾರತವಿಲ್ಲದೆ ಟೂರ್ನಿ ಆಯೋಜಿಸಿದರೆ ಉಂಟಾಗುವ ನಷ್ಟವನ್ನು ಮತ್ತು ಅದರಿ ಪರಿಣಾಮವನ್ನು ಪಿಸಿಬಿ ಅಧಿಕಾರಿಗಳಿಗೆ ವಿವರಿಸಿದ್ದಾರೆ ಎಂದು ವರದಿಯಾಗಿದೆ.
ಈ ಮೂಲಕ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಹೈಬ್ರಿಡ್ ಮಾದರಿಯೊಂದೇ ಪ್ರಸ್ತುತ ಆಯ್ಕೆ ಎಂದು ಐಸಿಸಿ ತಿಳಿಸಿದೆ. ಚಾಂಪಿಯನ್ಸ್ ಟ್ರೋಫಿ ಕುರಿತಾದ ತನ್ನ ನಿಲುವನ್ನು ಬಿಸಿಸಿಐ ಐಸಿಸಿಗೆ ತಿಳಿಸಿದೆ. ಆದರೆ ಅತ್ತ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಸೇರಿದಂತೆ, ಕೆಲ ಅಧಿಕಾರಿಗಳು ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ, ಭಾರತದ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ತಾಕೀತು ಮಾಡಿದೆ.
ಇಂತಹ ಹೇಳಿಕೆಗಳಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣವಾಗಲಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಎಚ್ಚರಿಸಿದೆ. ಹೀಗಾಗಿ ಯಾವುದೇ ಹೇಳಿಕೆ ನೀಡದೇ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಸಿದ್ಧತೆಗಳನ್ನು ಶುರು ಮಾಡಬೇಕೆಂದು ಪಿಸಿಬಿಗೆ ಐಸಿಸಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.