ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಮುಂದುವರೆಸಿದರು.
Bengaluru Weather: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ – ಹವಮಾನ ಇಲಾಖೆ..!
ಕಳಪೆ ಬ್ಯಾಟಿಂಗ್ ಫಾರ್ಮ್ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಭಾರತ ಹಾಗೂ ಆರ್ಸಿಬಿ ತಂಡದ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಹಿಗ್ಗಾಮುಗ್ಗಾ ಟೀಕಿಸಿದರು. ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ “ಅತಿಯಾಗಿ ಪುರಸ್ಕರಿಸಲ್ಪಟ್ಟ’ ಆಟಗಾರ ಎಂದು ಕರೆದಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ ಪಂದ್ಯದ ನಂತರ ಗ್ಲೆನ್ ಮ್ಯಾಕ್ಸ್ವೆಲ್ ಬಗ್ಗೆ ಪಾರ್ಥಿವ್ ಪಟೇಲ್ ಅವರಿಂದ ಈ ಹೇಳಿಕೆ ಬಂದಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಲ್ರೌಂಡರ್ ಮೂರು ಎಸೆತಗಳಲ್ಲಿ ಕೇವಲ ನಾಲ್ಕು ರನ್ ಗಳಿಸಿದರು. ಆದಾಗ್ಯೂ, ಆರ್ಸಿಬಿ ತಂಡ ತಮ್ಮ ತವರಿನ ಪ್ರೇಕ್ಷಕರ ಮುಂದೆ ಗುಜರಾತ್ ಟೈಟನ್ಸ್ ವಿರುದ್ಧ 4 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು.
ಸದ್ಯ ನಡೆಯುತ್ತಿರುವ ಐಪಿಎಲ್ 2024ರಲ್ಲಿ 35 ವರ್ಷದ ಗ್ಲೆನ್ ಮ್ಯಾಕ್ಸ್ವೆಲ್ ಅವರ ಕಳಪೆ ಪ್ರದರ್ಶನಕ್ಕಾಗಿ ಪಾರ್ಥಿವ್ ಪಟೇಲ್ ತಮ್ಮ ಅಧಿಕೃತ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಟೀಕಿಸಿದರು. “ಗ್ಲೆನ್ ಮ್ಯಾಕ್ಸ್ವೆಲ್… ಐಪಿಎಲ್ ಇತಿಹಾಸದಲ್ಲಿ ಅತಿಯಾಗಿ ಪುರಸ್ಕರಿಸಲ್ಪಟ್ಟ ಆಟಗಾರನಾಗಿದ್ದಾರೆ,” ಎಂದು ಬರೆದುಕೊಂಡಿದ್ದಾರೆ.
ಐಪಿಎಲ್ನ 17ನೇ ಆವೃತ್ತಿಯಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಆಡಿದ ಎಂಟು ಇನ್ನಿಂಗ್ಸ್ಗಳಲ್ಲಿ ಕೇವಲ 104 ರನ್ ಗಳಿಸಿದ್ದಾರೆ. ಇನ್ನು ಆರ್ಸಿಬಿ ಪರ 8.33ರ ಎಕಾನಮಿ ದರದಲ್ಲಿ ರನ್ ನೀಡಿ ಐದು ವಿಕೆಟ್ಗಳನ್ನು ಪಡೆದಿದ್ದಾರೆ.