ಬೆಂಗಳೂರು: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದ್ವಿಶತಕ ಹಾಗೂ ವೇಗದ ಶತಕ ಸಿಡಿಸಿರುವ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ಗೆ ಟೆಸ್ಟ್ ಕ್ರಿಕೆಟ್ ಆಡುವ ಅರ್ಹತೆ ಇಲ್ಲ ಎಂದು ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮ್ಯಾಕ್ಸ್ವೆಲ್ ಸ್ಥಾನ ಪಡೆದಿಲ್ಲ.
ಕಾಂಗರೂ ಪಡೆಯ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಮಾಜಿ ನಾಯಕ ರಿಕಿ ಪಾಂಟಿಂಗ್ 7ನ್ಯೂಸ್.ಕಾಮ್.ಎಯು ಜೊತೆ ಸಂವಾದ ನಡೆಸಿದ್ದು, ಮ್ಯಾಕ್ಸ್ವೆಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಸಾಕಷ್ಟು ರನ್ ಗಳಿಸದ ಕಾರಣ ಅವರು ಟೆಸ್ಟ್ ಕ್ರಿಕೆಟ್ ಆಡಲು ಅನರ್ಹನಾಗಿದ್ದಾರೆ ಎಂದು ಹೇಳಿದ್ದಾರೆ.
“ನಾನು ಆಸ್ಟ್ರೇಲಿಯಾ ತಂಡದ ಪರಿಸ್ಥಿತಿಯನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅವರು ಅತ್ಯುತ್ತಮ ಕ್ರಿಕೆಟ್ ಆಡುತ್ತಿದ್ದಾರೆ. ಅಲ್ಲದೆ ಅವರು ವಿಶ್ವ ಚಾಂಪಿಯನ್ಸ್ ಆಗಿದ್ದಾರೆ. ತವರಿನಲ್ಲಿ ನಡೆಯಲಿರುವ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಅವಕಾಶ ಸಿಗುವುದಿಲ್ಲ. ಆದರೆ ಉಪಖಂಡದಲ್ಲಿ ಆಯೋಜನೆಗೊಳ್ಳುವ ಟೆಸ್ಟ್ ಸರಣಿಗಳಲ್ಲಿ ನನಗೆ ಸ್ಥಾನ ಸಿಗುವ ಹಾಗೂ ಉತ್ತಮ ಪ್ರದರ್ಶನ ತೋರುವ ಭರವಸೆ ನನಗಿದೆ. ಆದ್ದರಿಂದ ನನ್ನ ಪ್ರಯತ್ನವನ್ನು ಮುಂದುವರಿಸುತ್ತೇನೆ. ಉಪಖಂಡದಲ್ಲಿ ನಡೆಯುವ ಟೆಸ್ಟ್ ಪಂದ್ಯದಲ್ಲಿ ನನಗೆ ಅವಕಾಶ ಸಿಗುವ ಭರವಸೆ ಇದೆ” ಎಂದು ಮ್ಯಾಕ್ಸ್ ವೆಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.