ವಿಜಯನಗರ: ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಸಮೀಪ ಕುಮತಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
Hubballi: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ- ಡಿ ಕೆ ಶಿವಕುಮಾರ್!
ಗ್ರಾಮದ ಸಾಗರ್ (14), ಗುರು (14), ವಿನಯ್ ( 11) ಮೃತ ದುರ್ದೈವಿಗಳು.
ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಹಾಗೂ ಡಿವೈಎಸ್ ಪಿ. ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ ದೊಡ್ಡಣ್ಣ ಹಾಗೂ ಪಿಎಸ್ ಐ ಸಿದ್ದರಾಮ ಬಿದರಾಣಿ ಭೇಟಿ ನೀಡಿ ಪರಿಶೀಲಿಸಿದರು.