ಡ್ಯಾಮ್ ನಲ್ಲಿ ಈಜಲು ಹೋಗಿ ಅವಘಡ: ನೀರು ಪಾಲಾದ ಇಬ್ಬರು ಬಾಲಕರು!

ಉಡುಪಿ:- ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ! 13 ವರ್ಷದ ಶ್ರೀಶ, 19 ವರ್ಷದ ಜಯಂತ್ ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.