ಶಿವಮೊಗ್ಗ: ಸಿದ್ದರಾಮಯ್ಯನವರು ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa), ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್ ಹೇಳಿರೋದ್ರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ (Mosque) ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.
Rowdysheeter Arrest: ಕೈಲಿ ಮಚ್ಚಿಡಿದು ಮಹಿಳೆಗೆ ಅವಾಜ್ ಹಾಕುತ್ತಿದ್ದ ರೌಡಿಶೀಟರ್ ಅರೆಸ್ಟ್!
ಸಿದ್ದರಾಮಯ್ಯ ಅವರು ಮೋದಿ (Modi) ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ.22ರ ನಂತರ ಹೋಗ್ತೀನಿ ಅಂತಾರೆ. ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟಿದ್ದಾರೆ.