ಬೆಂಗಳೂರು:- ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಕೈಗೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮುಂದಾಗಿದೆ.
ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾಹಿತಿ ಹಂಚಿಕೊಂಡಿದ್ದಾರೆ. ಪಾನಿಪೂರಿಗೆ ಬಳಸುವ ಐದು ಸಾಸ್, ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ 49 ಪ್ರದೇಶಗಳಿಂದ ಸಂಗ್ರಹಿಸಿದ ಸ್ಯಾಂಪಲ್ಸ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಖಚಿತವಾಗಿದ್ದ, ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರ ಮಾಡಲಾಗಿದೆಯಂತೆ.
ಕ್ಯಾನ್ಸರ್ ಕಾರಕ ಇರೋ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಇದರೊಂದಿಗೆ ಪಾನಿಪುರಿ ಅಂದ್ರೆ ಬಾಯಿ ನೀರು ಬಿಡುವ ಯುವತಿಯರು, ವಿದ್ಯಾರ್ಥಿಗಳೇ ಬಿಗ್ ಶಾಕ್ ಎದುರಾಗಿದೆಯಂತೆ.
ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನ ಸಂಗ್ರಹ ಮಾಡಿಕೊಂಡು ಟೆಸ್ಟ್ ಮಾಡಿ, ಬೆಂಗಳೂರಿನ 19 ಕಡೆಗಳಲ್ಲಿ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದರಂತೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆಯಂತೆ. ವಾರದಲ್ಲಿ ಪಾನಿಪುರಿಗೆ ಹಾಕೋ ಸಾಸ್ ಮತ್ತು ಮಿಟಾ ಬ್ಯಾನ್ ಮಾಡೋಕೆ ನಿರ್ಧರಿಸಿದ್ದು ಅಧಿಕೃತ ಘೋಷಣೆ ಬಾಕಿ ಇದೇ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಗೋಬಿ ಮಂಚೂರಿಯಲ್ಲಿ ಸಿಂಥೆಟಿಕ್ ಬಣ್ಣಗಳ ಬಳಕೆ ಅತಿ ಹೆಚ್ಚು, ಸಾಸ್ ಗಳಲ್ಲಿ ನಾನಾ ರಾಸಾಯನಿಕಗಳ ಬಳಕೆ, ಗುಣಮಟ್ಟವಿಲ್ಲದ ಸಾಸ್ಗಳ ಬಳಕೆ ಕಾರಣದಿಂದ ಗೋಬಿ ಮಂಚೂರಿ ಬಳಕೆ ಮಾಡುತ್ತಿರುವ ಹಲವು ವಸ್ತುಗಳ ಮೇಲೆ ನಿಷೇಧ ವಿಧಿಸಲಾಗಿತ್ತು
ಇನ್ನು, ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿತ್ತು. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿತ್ತು.
![](https://ainlivenews.com/wp-content/uploads/2024/01/Ad-Banner-copy-scaled.jpg)