ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ನಾನು 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಾನು ನಂಬುತ್ತೇನೆ. ಅದಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ 74 ವರ್ಷದ ಮೋದಿ,
ಸರ್ವಶಕ್ತ ದೇವರು ನನ್ನನ್ನು ವಿಶೇಷ ಉದ್ದೇಶಕ್ಕಾಗಿ ಕಳುಹಿಸಿದ್ದಾನೆ ಎಂದು ನಾನು ಭಾವಿಸುತ್ತೇನೆ. ದೇವರು ನನ್ನನ್ನು 2047 ರ ವೇಳೆಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಕಳುಹಿಸಿದ್ದಾನೆ. ದೇವರು ನನಗೆ ಮಾರ್ಗವನ್ನು ತೋರಿಸುತ್ತಿದ್ದಾನೆ. ದೇವರು ನನಗೆ ಶಕ್ತಿಯನ್ನು ನೀಡುತ್ತಿದ್ದಾನೆ. ನಾನು ಈ ಗುರಿಯನ್ನು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ. 2047 ರ ವೇಳೆಗೆ ಆ ಗುರಿಯನ್ನು ಸಾಧಿಸುವವರೆಗೆ ದೇವರು ನನ್ನನ್ನು ಮರಳಿ ಕರೆಯುವುದಿಲ್ಲ ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
500 Note Update: ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್
400 ಪಾರ್ ಎಂಬುದು ಬಿಜೆಪಿ ಸೃಷ್ಟಿ ಮಾಡಿದ ಘೋಷ ವಾಕ್ಯವಲ್ಲ. ಜನರಿಂದಲೇ ಬಂದ ಘೋಷಣೆಯಿದು. ಕಳೆದ ಐದು ವರ್ಷಗಳಲ್ಲಿ ನಾವು ಈಗಾಗಲೇ ಸಂಸತ್ತಿನಲ್ಲಿ 400 ಬಲ ಹೊಂದಿದ್ದೇವೆ. 95% ಅಂಕಗಳನ್ನು ಪಡೆದ ಯಾವುದೇ ಮಗು ಹೆಚ್ಚಿನ ಅಂಕ ಪಡೆಯಲು ಪ್ರಯತ್ನಿಸುವುದು ಸಹಜ ಎಂದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ದೂರುತ್ತಿರುವ ಹಿನ್ನೆಲೆಯಲ್ಲಿ ಹಿಂದಿನ ಚುನಾವಣಾ ಆಯೋಗದ ಕೆಲಸವನ್ನು ಉಲ್ಲೇಖಿಸಿ ಮೋದಿ ತಿರುಗೇಟು ನೀಡಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)