ಕಾರವಾರ:- ಮಾರಿಕಾಂಬೆ ದೇವಿಯ ಗೊಂಬೆ ನಾಪತ್ತೆ ಆಗಿದ್ದು, ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಈ ಘಟನೆ ಭಟ್ಕಳ ತಾಲೂಕಿನ ವಿವಾದಿತ ಸ್ಥಳವಾದ ಮುರಿನಕಟ್ಟೆಯಲ್ಲಿ ಜರುಗಿದೆ
ಧರ್ಮಸ್ಥಳಕ್ಕಷ್ಟೇ ಅಲ್ಲ, ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ ಸವಾಲ್!
ಶಂಸುದ್ದೀನ್ ಸರ್ಕಲ್ ಬಳಿಯಿದ್ದ 2 ಅಮ್ಮನವರ ಗೊಂಬೆಯನ್ನು ಮುರಿನಕಟ್ಟೆಗೆ ಸಾಗಿಸಿ, ಪೂಜೆ ಸಲ್ಲಿಸಿ ಬಂದಿದ್ದರು. ಕಾರ್ಗದ್ದೆ, ಹುರುಳಿಸಾಲ, ಕಡವಿನಕಟ್ಟೆ ಹಾಗೂ ರಂಗಿನಕಟ್ಟೆಯ ಗ್ರಾಮಸ್ಥರು ಪರಿಶೀಲಿಸಿದಾಗ ಬೊಂಬೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಸದ್ಯ ವಿಷಯ ಎಲ್ಲೆಡೆ ಹರಡಿ ಸ್ಥಳಕ್ಕೆ ನೂರಾರು ಮಂದಿ ಜಮಾಯಿಸಿ ಕೆಲ ಕಾಲ ಆತಂಕ ಸೃಷ್ಟಿ ಆಗಿತ್ತು. ಭಟ್ಕಳ ನಗರ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ವೇಳೆ ಕೆಲವು ಹೊತ್ತು ಸ್ಥಳೀಯರಿಗೂ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.
ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.