ಕಳೆದ ಎರಡು ಮೂರು ವಾರಗಳಿಂದ ಚಿನ್ನ ಬೆಳ್ಳಿ ಲೋಹಗಳ ಬೆಲೆ ಊಹೆಗೂ ಮೀರಿದ ಪ್ರಮಾಣದಲ್ಲಿ ಏರಿಕೆ ಆಗಿವೆ. ಈಗ ಗಲ್ಫ್ ಪ್ರದೇಶದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,475 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 15ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 847.5 ರೂ