ಅಮೆರಿಕದಲ್ಲಿ ಹೆಚ್ಚಿನ ಮಟ್ಟದಲ್ಲಿರುವ ಬಡ್ಡಿದರ ಅದೇ ಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆಯಾದ್ದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಇದೆ.
ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ – BSY..!
ಚಿನ್ನ ಮತ್ತು ಬೆಳ್ಳಿ ಬೆಲೆ ಈ ಬಾರಿ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆಯಷ್ಟು ಏರಿಕೆ ಆಗಿದೆ. ಒಟ್ಟಾರೆ ಈ ವಾರ ಏರಿಕೆಗಿಂತ ಇಳಿಕೆಯ ಪ್ರಮಾಣ ಹೆಚ್ಚಿದೆ. ಅಮೆರಿಕದ ಬಡ್ಡಿದರ ಇನ್ನೂ ಕೆಲ ತಿಂಗಳ ಕಾಲ ಮೇಲ್ಮಟ್ಟದಲ್ಲಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,225 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 3ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 822.50 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)