ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಹಿಂದಿನ ಎರಡು ವಾರದಲ್ಲಿ ಒಂದು ವಾರ ಬಹಳ ದೊಡ್ಡ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ ಆಗಿತ್ತು. ಕಳೆದ ವಾರ ಬೆಲೆ ಸ್ವಲ್ಪಮಟ್ಟಿಗೆ ತಹಬದಿಗೆ ಬಂದಿದೆ. ಈ ವಾರ ಚಿನ್ನದ ಬೆಲೆ ಯಾವ ದಿಕ್ಕಿಗೆ ಹೋಗುತ್ತದೆ ನೋಡಬೇಕು. ಅಮೆರಿಕದಲ್ಲಿ ಫೆಡ್ ರಿಸರ್ವ್ ಬಡ್ಡಿದರ ಇದೇ ವಾರ ಘೋಷಿಸಲಿದೆ. ಇದರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,730 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,610 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 773 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 761 ರೂ