ಕಳೆದ ವಾರದಂತೆ ಈ ವಾರವೂ ಬೆಲೆಗಳಲ್ಲಿ ವ್ಯತ್ಯಯವಾಗಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್ಗೆ 20 ರೂನಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರುಪಾಯಿಯಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಬ್ರಿಟನ್ ಆರ್ಥಿಕ ಹಿಂಜರಿತ, ಜಪಾನ್ ಆರ್ಥಿಕ ಹಿಂಜರಿತದ ಪರಿಣಾಮವಾಗಿ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿರುವಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,090 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 756 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 709 ರೂ