ಚಿನ್ನದ ಬೆಲೆ ಮತ್ತೆ ಗಗನಕ್ಕೆ ಏರಿಕೆ ಆಗಿದೆ.
ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 85 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ 60 ಪೈಸೆ ಹೆಚ್ಚಾಗಿದೆ. ಅಗ್ರಮಾನ್ಯ ಚಿನ್ನ ಬಳಕೆಯ ದೇಶಗಳಾದ ಚೀನಾ ಮತ್ತು ಟರ್ಕಿಯ ರೀಟೇಲ್ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿ ಜೋರಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಲೆ ವಿಪರೀತವಾಗಿ ಹೆಚ್ಚಾಗುತ್ತಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 250 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,750 ರುಪಾಯಿಯಲ್ಲಿ ಇದೆ.
ಸೊನ್ನೆ ಸುತ್ತುವುದರಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಅಗ್ರಸ್ಥಾನ!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 2ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 786 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ