ಬೆಂಗಳೂರು:- ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ಚಿಕ್ಕಮಗಳೂರಿನಲ್ಲಿ ಮೊದಲ ಮಳೆ ತಂದ ಅವಾಂತರ: ಮರ ಬಿದ್ದು ನಜ್ಜುಗುಜ್ಜಾದ ಕಾರು!
ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ. ಸದ್ಯ ಸರ್ಕಾರದ ದಿಢೀರ್ ಯೂಟರ್ನ್ ನಿರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಯಾರ ಒತ್ತಡ ಹೆಚ್ಚಾಗಿತ್ತು..? ಎಂಬ ಪ್ರಶ್ನೆಯೂ ಹುಟ್ಟುಹಾಕಿದೆ.
ಸಿಐಡಿ ತನಿಖೆ ಆದೇಶ ಬೆನ್ನಲ್ಲೇ ಐಓ ಆಗಿ ರಾಘವೇಂದ್ರ ಹೆಗ್ಡೆ ಅವರ ನೇಮಕ ಆಗಿತ್ತು. ಆದ್ರೆ ಆದೇಶ ಹಿಂಪಡೆಯಲಾಗಿದ್ದು, ಸಿಐಡಿ ಡಿಜಿಪಿ ತನಿಖಾಧಿಕಾರಿಯನ್ನ ನೇಮಕಗೊಳಿಸಿದ ಬಳಿಕ ಏಕೆ ಸರ್ಕಾರದ ವರಸೆ ಬದಲಾಯ್ತು..? ಎಂಬುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.