ಬೆಂಗಳೂರು:- ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.
ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಎಡಿಎಲ್ಆರ್ ಗಳಿಗೆ ಸೂಚಿಸಿದರು.
ಈ ಮೂಲಕ ರಾಜ್ಯ ಸರ್ಕಾರವು ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್ ಸಾಗುವಳಿ ಚೀಟಿ ನೀಡಬೇಕು ಎಂದು ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿಯಲ್ಲೇ 5,000 ರೈತರಿಗೆ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಎಡಿಎಲ್ಆರ್ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಕ್ರಮ-ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು ಎಂದು ತಿಳಿಸಿದರು.
ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ ಬದುಕುತ್ತಿರುವವರಿಗೆ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಿ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು. ಬಗರ್ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಅಧಿಕಾರಿಗಳನ್ನು ಪ್ರಶಂಸಿಸಿದ ಅವರು, ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ ಎಂದು ಕಿವಿಮಾತು ಹೇಳಿದರು
ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.