ಬೆಂಗಳೂರು:- ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಡಿಸೆಂಬರ್ನಿಂದ ರೇಷನ್ ಸಿಗಲಿದೆ.
India vs Australia Test: ಭಾರತಕ್ಕೆ ಮರಳಿದ ಕೋಚ್ ಗಂಭೀರ್! 2ನೇ ಟೆಸ್ಟ್ ಯಾವಾಗ!?
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ಮರು ಪರಶೀಲನೆ ಮಾಡುತ್ತಿದೆ. ಅರ್ಹ ಫಲಾನುಭವಿಗಳ ಕಾರ್ಡ್ಗಳನ್ನು ಮತ್ತೆ ನೀಡಲು ಸರ್ಕಾರ ಮುಂದಾಗಿದೆ. ಆಧಾರ್, ಪ್ಯಾನ್ ಕಾರ್ಡ್, ಐಟಿ ರಶೀದಿ ಮುಂತಾದ ದಾಖಲೆಗಳ ಮೂಲಕ ಅರ್ಹತೆ ಪಡೆದವರು ಕಾರ್ಡ್ಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ.
ಬಿಪಿಎಲ್ ಕಾರ್ಡ್ ಮರು ಸ್ಥಾಪನೆಗೆ ಈ ಹಿಂದೆ ನವೆಂಬರ್ 25 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ, ಎಪಿಎಲ್ ನಿಂದ ಬಿಪಿಎಲ್ಗೆ ಬದಲಾಯಿಸಲು ಅಧಿಕಾರಿಗಳಿಗೆ ಸಾಕಷ್ಟು ಕಾಲಾವಕಾಶ ಅಗತ್ಯವಿರುವ ಕಾರಣ ನವೆಂಬರ್ 28ರವರೆಗೆ ಅವಕಾಶ ನೀಡಲಾಗದೆ. ಈಗಾಗಲೇ ರಾಜ್ಯದಲ್ಲಿ ಶೇ 90 ರಷ್ಟು ಕಾರ್ಡ್ಗಳನ್ನು ಎಪಿಎಲ್ನಿಂದ ಬಿಪಿಎಲ್ ಮರುಸ್ಥಾಪನೆ ಮಾಡಲಾಗಿದೆ. ರಾಜಧಾನಿಯಲ್ಲಿ ಶೇ 95 ರಷ್ಟು ಬಿಪಿಎಲ್ ಕಾರ್ಡ್ ಮರುಸ್ಥಾಪನೆಯಾಗಿದೆ. ಉಳಿದ ಕಾರ್ಡ್ ಸರಿಪಡಿಸಲು ಇನ್ನೆರಡು ದಿನ ಕಾಲವಕಾಶ ಇದೆ.
ತೆರಿಗೆ ಪಾವತಿದಾರರ 1,06,152 ಬಿಪಿಎಲ್ ಕಾರ್ಡ್ಗಳನ್ನು ಕೂಡಾ ಸಸ್ಪೆಂಡ್ ಮಾಡಲಾಗಿತ್ತು. ಸದ್ಯ ಈ ಕಾರ್ಡ್ಗಳನ್ನು ಮರುಸ್ಥಾಪನೆ ಮಾಡಿದ್ದು, ನಂತರದ ಹಂತದಲ್ಲಿ ಆಹಾರ ಇಲಾಖೆ ಮರು ಪರಶೀಲನೆ ಮಾಡಲಿದೆ.
4,272 ಮಂದಿ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದು ದಂಡಾಸ್ತ್ರ ಪ್ರಯೋಗಿಸಲು ಸರ್ಕಾರ ಮುಂದಾಗಿದೆ. ಬಿಪಿಎಲ್ ಕಾರ್ಡ್ ಮರು ಪರಶೀಲನೆಗೆ ಇದ್ದ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿದೆ. ಜತೆಗೆ, ಮುಂದಿನ ತಿಂಗಳಿಂದ ಪಡಿತರ ನೀಡಲು ಬೇಕಾದ ಎಲ್ಲ ವವಸ್ಥೆಗಳನ್ನು ಮಾಡಿಕೊಂಡಿದೆ.