ಬೆಂಗಳೂರು: ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸಂಬಂಧ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , 6-8 ನೇ ತರಗತಿ ಶಿಕ್ಷಕರ ನೇಮಕಾತಿ ಸಂಬಂಧ ಸರ್ಕಾರ ರೂಪಿಸಿದ್ದ ವೃಂದ ಮತ್ತು ನೇಮಕಾತಿ ಪ್ರಕಟಣೆಯಲ್ಲಿ ಟಿಇಟಿ ಪಾಸಾಗಿರುವ ಬಯೋಟೆಕ್ನಾಲಜಿ ಪದವೀಧರ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿತ್ತು. ಇದೀಗ ಟಿಇಟಿ ಪಾಸಾಗಿರುವ,
ಬಯೋಟೆಕ್ನಾಲಜಿ ಪದವೀಧರರಿಗೂ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಿಇಟಿ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ. ಬಯೋಟೆಕ್ನಾಲಜಿ ಪದವಿ ಪಡೆದ ಬಿಎಡ್, ಡಿಎಡ್ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿತ್ತು. ಹೀಗಾಗಿ ಬಯೋಟೆಕ್ನಾಲಜಿಯಲ್ಲಿ ಪದವಿ ಪಡೆದ ಸಾವಿರಾರು ಅಭ್ಯರ್ಥಿಗಳು ಟಿಇಟಿ ಪಾಸಾಗಿದ್ದರೂ ಶಿಕ್ಷಕರ ನೇಮಕಾತಿ ವಂಚಿತರಾಗುವಂತಾಗಿತ್ತು. ಇದೀಗ ನಿಯಮಗಳನ್ನು ಬದಲಿಸಿ ಪರಿಷ್ಕೃತ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.

