ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಜಿಎಸ್ಟಿ ಕೌನ್ಸಿಲ್ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕೌನ್ಸಿಲ್ ಸಹ ನಮ್ಕೀನ್ ಮೇಲಿನ ದರವನ್ನು ಶೇ.18 ರಿಂದ ಶೇ.12 ಕ್ಕೆ ಇಳಿಸಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.
ಗಡಿಬಿಡಿಯಲ್ಲಿ ಗರ್ಭ ನಿರೋಧಕ ಮಾತ್ರೆಯನ್ನು ಹೀಗೆಲ್ಲಾ ತಿನ್ಬೇಡಿ: ಇಲ್ಲದಿದ್ರೆ ಪ್ರಾಣಕ್ಕೆ ಆಪತ್ತು!
ಕಳೆದ ಆರು ತಿಂಗಳಲ್ಲಿ ಆನ್ಲೈನ್ ಗೇಮಿಂಗ್ನಿಂದ ಗಳಿಸಿದ ಆದಾಯವು ಶೇ.412 ರಷ್ಟು ಹೆಚ್ಚಾಗಿದೆ. ಆನ್ಲೈನ್ ಗೇಮಿಂಗ್ನಿಂದ ಆದಾಯವು ಆರು ತಿಂಗಳಲ್ಲಿ 6,909 ಕೋಟಿ ರೂ.ಗೆ ಹೆಚ್ಚಾಗಿದೆ. ಇದಲ್ಲದೇ, ಕಳೆದ ಆರು ತಿಂಗಳಲ್ಲಿ ಕ್ಯಾಸಿನೊಗಳ ಆದಾಯವು ಶೇ.34 ರಷ್ಟು ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.