ಸ್ಯಾಂಡಲ್ವುಡ್ (Sandalwood) ಸಲಗ ದುನಿಯಾ ವಿಜಯ್ (Duniya Vijay) ಅವರು ‘ಭೀಮ’ನಾಗಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. ಇದರ ನಡುವೆ ಅಭಿಮಾನಿಗಳಿಗೆ ವಿಜಯ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಒಂದೇ ಸಿನಿಮಾದಲ್ಲಿ ದುನಿಯಾ ವಿಜಯ್ ಮತ್ತು ಮಗಳು ಮೋನಿಕಾ(Monica Vijay) ನಟಿಸುತ್ತಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ
ಇತ್ತೀಚೆಗೆ ದೊಡ್ಡ ಮಗಳು ಮೋನಿಕಾ ಸಿನಿಮಾರಂಗಕ್ಕೆ ಬರೋದಾಗಿ ದುನಿಯಾ ವಿಜಯ್ ಅನೌನ್ಸ್ ಮಾಡಿದ್ದರು. ಅದರಂತೆ ಇದೀಗ ಮೋನಿಕಾ ವಿಜಯ್ ಚೊಚ್ಚಲ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ದರ್ಶನ್ ನಟನೆಯ ‘ಕಾಟೇರ’ (Katera) ಚಿತ್ರದ ರೈಟರ್ ಜಡೇಶ್ ಕುಮಾರ್ (Jadesh Kumar) ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್-ಮೋನಿಕಾ ಜೊತೆಯಾಗಿ ನಟಿಸುತ್ತಿದ್ದಾರೆ.
ಸಂಬಂಧಗಳ ಕುರಿತು ಬಾಂಧವ್ಯ ಸಾರುವ ಸಿನಿಮಾದಲ್ಲಿ ದುನಿಯಾ ವಿಜಯ್- ಮಗಳು ಮೋನಿಕಾ ಒಟ್ಟಾಗಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದೆ. ಇಬ್ಬರ ಪಾತ್ರ ಕೂಡ ಡಿಫರೆಂಟ್ ಆಗಿದೆ. ತೆರೆಯ ಮೇಲೂ ಕೂಡ ತಂದೆ-ಮಗಳಾಗಿಯೇ ನಟಿಸುತ್ತಿದ್ದಾರಾ ಎಂಬುದಕ್ಕೆ ಉತ್ತರ ಸಿಕ್ಕಿಲ್ಲ. ಇಬ್ಬರ ಕಾಂಬಿನೇಷನ್ ತೆರೆಯ ಮೇಲೆ ಹೇಗೆ ವರ್ಕ್ ಆಗಲಿದೆ ಎಂಬುದರ ಬಗ್ಗೆ ಫ್ಯಾನ್ಸ್ಗೆ ಕುತೂಹಲ ಕೆರಳಿಸಿದೆ