ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಇಲ್ಲಿದೆ ವಿವರ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು..?
- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
- ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
- ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
- ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
- ಬ್ಯಾಂಕ್ ಪಾಸ್ ಬುಕ್ ಪ್ರತಿ.
- ಪೋಟೋ.
- ಪಹಣಿ/ಉತಾರ್/RTC.
- ರೇಷನ್ ಕಾರ್ಡ ಪ್ರತಿ.
- ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.