ಬೆಂಗಳೂರು:- ನಾವು ಈಗ ಹೇಳುತ್ತಿರುವ ಈ ವಿಚಾರ ಒಂದೆಡೆ ರೈತರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದ್ರೆ ಮತ್ತೊಂದೆಡೆ ಗ್ರಾಹಕರಿಗೆ ಬೇಸರ ಮೂಡಿಸುವಂತಾಗಿದೆ.
ಚಳಿಗಾಲದಲ್ಲಿ ಸ್ನಾನ ಮಾಡಲು ಬಿಸಿನೀರು ಬಳಸ್ತೀರಾ? ಹುಷಾರ್, ಡೇಂಜರ್ ಅಂತಿದ್ದಾರೆ ವೈದ್ಯರು!
ಎಸ್, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ ಆಗಲಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಹಿತಿ ನೀಡಿದರು.
ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತೆ ಎಂದರು.
ಸರ್ಕಾರ ಈ ಹಿಂದೆ ಪ್ರತಿ ಲೀಟರ್ ಪ್ಯಾಕೇಟ್ನಲ್ಲಿ 50 ಎಂಎಲ್ ಹಾಲನ್ನು ಹೆಚ್ಚಳ ಮಾಡಿ 2 ರೂಪಾಯಿ ದರ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರ ಕೆಂಗಣ್ಣಿಗೆ ಗುರಿಯಾದ ಸರ್ಕಾರ, ಇದನ್ನು ವಾಪಸ್ ಪಡೆಯಲು ಮುಂದಾಗಿದೆ.
ಪ್ರತಿ ಲೀಟರ್ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದು, ದಿಢೀರ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡ ಇಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರ ಜನರಿಗೆ ಅನಕೂಲವಾಗಲಿ ಅಂತ ಗ್ಯಾರೆಂಟಿ ಯೋಜನೆ ಜಾರಿ ಮಾಡಿದೆ. ಆದರೆ, ಇದೀಗ ಹಾಲಿನ ದರ ಏರಿಕೆ ಮೂಲಕ ಜನರಿಗೆ ಹೊರೆ ಮಾಡುತ್ತಿರುವುದು ಸರಿಯಲ್ಲ. ಹೀಗಾಗಿ, ಹಾಲಿನ ದರ ಏರಿಕೆ ಬೇಡ ಎಂದು ಆಗ್ರಹಿಸಿದ್ದಾರೆ.