ನವದೆಹಲಿ: ಸಂಸತ್ನಲ್ಲಿ 2025-26 ನೇ ಸಾಲಿನ ಬಜೆಟ್ ಮಂಡನೆ ಆರಂಭ ಆಗಿದೆ. ಅದಲ್ಲದೆ ಪ್ರಧಾನ ಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇನ್ನೂ ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗ್ರಾಹಕರೇ ಗಮನಿಸಿ: ಇಂದಿನಿಂದ UPI, LPG ಸಿಲಿಂಡರ್, ವಾಹನ ನಿಯಮಗಳಲ್ಲಿ ಆಗಲಿದೆ ಮಹತ್ವದ ಬದಲಾವಣೆಗಳು!
ಹೌದು ಮೊದಲಿನಿಂದಲೂ ಕೇಂದ್ರ ಸರ್ಕಾರ ಅನ್ನದಾತರಿಗಾಗಿಯೇ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಇದ್ರಲ್ಲಿ ಒಂದು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ. 3 ಲಕ್ಷದವರೆಗೂ ಇದ್ದ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷದವರೆಗೂ ಹೆಚ್ಚಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಕೆಸಿಸಿ ಮೂಲಕ ಪಡೆಯುವ ಸಾಲದ ಸಾಲದ ಮಿತಿಯನ್ನು ₹ 3,000 ರಿಂದ ₹ 5,000 ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.