ಬೆಂಗಳೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ.
2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಗುಡ್ ನ್ಯೂಸ್: 10,000 ರೂ. ನೇರವಾಗಿ ಖಾತೆಗೆ
ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿಂದ ಕೊಬ್ಬರಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ. ಹಾಸನ ಸೇರಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.