ಕನ್ನಡದ ‘ಗಿಲ್ಲಿ’ (Gilli Kannada Film) ನಾಯಕಿ ರಾಕುಲ್ ಪ್ರೀತ್ ಸಿಂಗ್ (Rakul Preet Singh) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ (Jackky Bhagnani) ಜೊತೆ ಮದುವೆಗೆ (Wedding) ರಾಕುಲ್ ಸಜ್ಜಾಗಿದ್ದಾರೆ. ಅದಷ್ಟೇ ಅಲ್ಲ, ಮದುವೆಗೆ ಡೇಟ್ ಕೂಡ ಫಿಕ್ಸ್ ಆಗಿದೆ.
ನಟಿ ರಾಕುಲ್ ಅವರು ಬಹುಕಾಲದ ಗೆಳೆಯ ಜಾಕಿ ಭಗ್ನಾನಿ ಜೊತೆ ಫೆಬ್ರವರಿ 22ರಂದು ಮದುವೆಗೆ ಪ್ಲ್ಯಾನ್ ಮಾಡಿದ್ದಾರೆ. ಗೋವಾದಲ್ಲಿ ಅದ್ದೂರಿಯಾಗಿ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ
ಸದ್ಯ ರಾಕುಲ್ ಅವರು ಬಾಯ್ಫ್ರೆಂಡ್ ಜಾಕಿ ಜೊತೆ ವಿದೇಶದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿದ್ದಾರೆ.
ಅಂದಹಾಗೆ, ರಾಕುಲ್- ಜಾಕಿ ಜೋಡಿ ಕಳೆದ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ. ಒಬ್ಬರನೊಬ್ಬರು ಪ್ರೀತಿಸುತ್ತಿದ್ದಾರೆ. ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಮದುವೆಗೆ ರೆಡಿಯಾಗಿದ್ದಾರೆ.