ಬೆಂಗಳೂರು;- ರಾಜ್ಯ ಸರ್ಕಾರ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ನಿಗದಿತ ಅವಧಿಯೊಳಗೆ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ.
ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಮಾಸಿಕವಾಗಿ ಪಾವತಿ ಮಾಡುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿ ಸಿದ್ದ ಪಡಿಸಿ ನಿಗದಿತ ಸಮಯಕ್ಕೆ ತಲುಪಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡುವ ಸಲುವಾಗಿ ಡಿ.ಡಿ.ಓ, ಡಿ.ಬಿ.ಟಿ ಸಲ್ ಮತ್ತು ಖಜಾನೆಗಳಿಗೆ ಯಾವುದೇ ರೀತಿಯ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಎದುರಾದರೆ ಬಗೆಹರಿಸಲು ಸೂಚಿಸಲಾಗಿದೆ.ಅದೇ ರೀತಿ, ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ತಿಳಿಸಲಾಗಿದೆ.
ಈ ಕುರಿತು ಖಜಾನೆ ಆಯುಕ್ತರ ಪ್ರಸ್ತಾವನೆ ಮಾಡಲಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ ಮೂಲಕ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಡಿ.ಬಿ.ಟಿ ಮತ್ತು ಖಜಾನೆ-2 ರ ಮೂಲಕ ಹಣವನ್ನು ನೇರವಾಗಿ ವರ್ಗಾವಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.