ಮಂಗಳೂರು:- ರಾಜ್ಯದ ಪ್ರತಿಷ್ಠಿತ ವಿವಿಯೊಂದರ ಅಧ್ಯಯನ ವರದಿ ಭಿನ್ನವಾದುದನ್ನೇ ಹೇಳಿದೆ. ನಿಟ್ಟೆ ವಿವಿಯ ವಿಜ್ಞಾನಿ ಪ್ರ. ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಮಹತ್ವದ ಸಂಶೋಧನೆ ನಡೆಸಿದ್ದು, ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಅಂಶ ಅಡಿಕೆಯಲ್ಲಿದೆ ಎಂದು ತಿಳಿಸಿದೆ.
ಅಡಿಕೆ ರಸ ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎಂಬುದನ್ನು ಪತ್ತೆ ಮಾಡಿರುವುದಾಗಿ ನಿಟ್ಟೆ ವಿವಿಯ ವಿಜ್ಞಾನಿಗಳ ತಂಡ ಪ್ರತಿಪಾದಿಸಿದೆ. ಅಡಿಕೆಯ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದಿದೆ.
ನಿಟ್ಟೆ ವಿವಿಯ ವಿಜ್ಞಾನಿಗಳ ತಂಡದ ಸಂಶೋಧನೆಯನ್ನು ಪರಿಗಣಿಸಿ ಅಡಿಕೆಯ ಬಗ್ಗೆ ಸಮಗ್ರ ಅಧ್ಯಯನವಾಗಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಇನ್ನೂ ಅಡಿಕೆಯನ್ನು ಕ್ಯಾನ್ಸರ್ ಕಾರಕ ಎಂದು ಐಎಆರ್ಸಿ ಅಧ್ಯಯನ ವರದಿ ಏಕಾಏಕಿ ವರ್ಗೀಕರಿಸಿತ್ತು. ಪಾನ್, ಪಾನ್ ಮಸಾಲಾ, ಗುಟ್ಕಾ ಇತ್ಯಾದಿ ಸೇವಿಸುವುದರಿಂದ ಉಂಟಾಗುವ ವಿಷಯವನ್ನು ಮುಖ್ಯವಾಗಿಟ್ಟುಕೊಂಡು ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗಿತ್ತು. ಆದರೆ, ಇದು ಪರಿಪೂರ್ಣ ಅಧ್ಯಯನ ಅಲ್ಲ ಎಂದು ಕ್ಯಾಂಪ್ಕೋ ವಾದಿಸಿತ್ತು.