ಐಪಿಎಲ್ 2024 ರ ಆರಂಭದ ಮೊದಲು, ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ನೇಮಿಸಿತ್ತು. ಈ ನಿರ್ಧಾರವು ಆಗ ಭಾರೀ ಟೀಕೆಗೆ ಗುರಿಯಾಗಿತ್ತು.
ಏಕೆಂದರೆ ಐದು ಬಾರಿ ಚಾಂಪಿಯನ್ ಪಟ್ಟವನ್ನು ಗೆದ್ದ ತಂಡವು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ, ಮಾರ್ಚ್ 22 ರಿಂದ ಆರಂಭವಾಗಲಿರುವ ಹೊಸ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಬದಲಿಗೆ ರೋಹಿತ್ ಶರ್ಮಾ ಮತ್ತೆ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಎದುರಾಗಿದ್ದು, CSK ವಿರುದ್ಧದ ಪಂದ್ಯಕ್ಕೆ ನಿಷೇಧ ಮಾಡಲಾಗಿದೆ.
ಮಾರ್ಚ್ 22 ರಿಂದ ಶುರುವಾಗಲಿರುವ IPL 2025ರ ಟೂರ್ನಿಯ ಮೊದಲ ಪಂದ್ಯದಲ್ಲಿ KKR ಮತ್ತು RCB ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಲಿದೆ. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ.
ಏಕೆಂದರೆ ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಆಡುವ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಸಿಎಸ್ಕೆ ವಿರುದ್ಧದ ಮ್ಯಾಚ್ನಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗಿದೆ.