ಬೆಂಗಳೂರು:- ಮೂರು ತಿಂಗಳಿಂದ ಗೃಹ ಲಕ್ಷ್ಮೀ ಯೋಜನೆಯ ಬಂದಿಲ್ಲ ಎಂದು ಬೇಜಾರಲ್ಲಿ ಇರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ: ಯೋಗಿ ಆದಿತ್ಯನಾಥ್!
ಗೃಹಲಕ್ಷ್ಮಿ ಯೋಜನೆ ಬಗ್ಗೆ DCM ಡಿಕೆ ಶಿವಕುಮಾರ್ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಮೂರು ತಿಂಗಳಿಂದ ಗೃಹ ಲಕ್ಷ್ಮೀ ಯೋಜನೆಯ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ನಮ್ಮ ಸರ್ಕಾರದಿಂದ ಫಲಾನುಭವಿಗಳಿಗೆ ಯಾವುದೇ ರೀತಿಯ ಮೋಸವಾಗುವುದಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ. ಇದರ ಜೊತೆಗೆ ಕೆಲವು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣವೂ ಬಂದಿಲ್ಲವೆಂಬ ಆರೋಪವಿದೆ. ಈ ಹಣವನ್ನೂ ನಾವು ಶೀಘ್ರವೇ ಹಾಕುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದಲೂ ಗೃಹಲಕ್ಷ್ಮಿ ಯೋಜನೆಯ ಹಣ ಬರದ ಕಾರಣ ರಾಜ್ಯದ ಕೋಟ್ಯಂತರ ಮಹಿಳೆಯರು ಆತಂಕದಲ್ಲಿದ್ದಾರೆ. ಯಾವಾಗ ತಮ್ಮ ಖಾತೆಗೆ ಹಣ ಜಮಾ ಆಗುತ್ತದೋ ಅಂತಾ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಪ್ರಮುಖವಾಗಿದೆ.