IPL ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯ ಆಗಿದ್ದು, ಎಲ್ಲಾ ಪ್ರಾಂಚೈಸಿಗಳು ಉತ್ತಮ ಆಟಗಾರರನ್ನೇ ಖರೀದಿ ಮಾಡಿದೆ. ಅದರಲ್ಲಿ RCB ಕೂಡ ಒಂದು.
ಮಹಿಳೆಯರಿಗೆ ಬಂಪರ್ ಸುದ್ದಿ: ಅಡುಗೆ ಎಣ್ಣೆ ಬೆಲೆ ದಿಢೀರ್ ಕುಸಿತ, ನಿಮ್ಮ ಊರಲ್ಲಿ ಎಷ್ಟಿದೆ!
ಅಳೆದು ತೂಗಿ ಸ್ಟಾರ್ ಆಟಗಾರರನ್ನೇ ಖರೀದಿ ಮಾಡಿದೆ. ಆರ್ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.
ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.
ಅಲ್ಲದೆ ಆರ್ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.