ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯಕ್ಕೆ ಕೊಹ್ಲಿ ಲಂಡ್ನಲ್ಲಿ ಸೆಟಲ್ ಆಗ್ತಾರೆ ಅಂತ ಹೇಳಲಾಗ್ತಿದೆ. ಇದರ ಮಧ್ಯೆ ಕೊಹ್ಲಿ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್.
Sucide: ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!
ಕಿಂಗ್ ಕೊಹ್ಲಿ ಎಲ್ಲ ಫಾರ್ಮೆಟ್ನ ಕ್ರಿಕೆಟ್ಗೂ ನಿವೃತ್ತಿ ಘೋಷಿಸಲಿದ್ದಾರೆ ಅಂತ ಸುದ್ದಿಯಾಗ್ತಿದೆ. ಚಾಂಪಿಯನ್ಸ್ ಟ್ರೋಫಿ ಬಳಿಕ ನಿವೃತ್ತಿಯಾಗ್ತಾರೆ ಅಂತ ಹೇಳಲಾಗ್ತಿತ್ತು. ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್ಕುಮಾರ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.
ವಿರಾಟ್ ಕೊಹ್ಲಿ ಇನ್ನೂ ಹಲವು ವರ್ಷಗಳ ಕಾಲ ಕ್ರಿಕೆಟ್ ಆಡ್ತಾರೆ ಎಂದಿದ್ದಾರೆ ರಾಜ್ಕುಮಾರ್ ಶರ್ಮಾ.ಟೀಮ್ ಇಂಡಿಯಾ ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ ಬಾಲ್ಯದ ಕೋಚ್ ಅನ್ನು ಭೇಟಿಯಾಗಿದ್ದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ರಾಜ್ಕುಮಾರ್ ಶರ್ಮಾ ವಿದಾಯದ ಬಗ್ಗೆ ಕೂಡ ಮಾತನಾಡಿದ್ದಾರೆ
ಇನ್ನೂ ಕೆಲ ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಆಡುಂವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಜ್ಕುಮಾರ್ ಶರ್ಮಾ ತಿಳಿಸಿದ್ದಾರೆ. ಇದರೊಂದಿಗೆ 2025 ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವುದಿಲ್ಲ ಎಂಬುದು ಖಚಿತವಾಗಿದೆ.
ಭಾರತದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸುವ ಮೂಲಕ ಕೊಹ್ಲಿಗೆ ಶಾಕ್ ನೀಡಿದ್ದಾರೆ.
ಕಸ್ತೂರಬಾ ರಸ್ತೆಯಲ್ಲಿರುವ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ನಲ್ಲಿ ರಾತ್ರಿ ಅವಧಿಗೂ ಮೀರಿ ಕಾರ್ಯಾಚರಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರೋದಾಗಿ ಮಾಹಿತಿ ಸಿಕ್ಕ ಬೆನ್ನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.