ಬೆಂಗಳೂರು: ನಮ್ಮ ಮೆಟ್ರೋ ಬೆಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಮಾರ್ಗಗಳ ವಿಸ್ತರಣೆ ಕೂಡಾ ಆಗುತ್ತಿದೆ. ಲಕ್ಷಾಂತರ ಜನಕ್ಕೆ ನಮ್ಮ ಮೆಟ್ರೋದಿಂದ ಅನುಕೂಲ ಆಗಿದೆ. ಹೀಗಾಗಿರುವಾಗಲೇ ನಮ್ಮ ಮೆಟ್ರೋ ಸಾಕಷ್ಟು ಅಪ್ ಗ್ರೇಡ್ ಆಗುತ್ತಿದೆ. ಶೀಘ್ರದಲ್ಲೇ ನಮ್ಮ ಮೆಟ್ರೋ ಹಳಿಗಳಿಗೆ ಚಾಲಕ ರಹಿತ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಾಗಿದೆ.
ಬಹಳ ಕಾತುರದಿಂದ ಕಾಯುತ್ತಿದ್ದ ಬೆಂಗಳೂರು ಜನತೆಗೆ ಇದೀಗ ಸಿಹಿಸುದ್ದಿಯೊಂದು ಬಂದಿದ್ದು, ಚೀನಾದಿಂದ ಹಳದಿ ಮೆಟ್ರೋ ಕೊನೆಗೂ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತಲುಪಿದೆ.ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ 6 ರೈಲಿನ ಕೋಚ್ಗಳು ಸುರಕ್ಷಿತವಾಗಿ ಹೆಬ್ಬಗೋಡಿ ಡಿಪೋಗೆ ತಲುಪಿರುವುದಾಗಿ ನಮ್ಮ ಮೆಟ್ರೋ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ತಿಳಿಸಿದೆ.
Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ
ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗಕ್ಕಾಗಿ ಚೀನಾದಿಂದ ಈ ರೈಲಿನ ಬೋಗಿಗಳನ್ನು ತರಿಸಲಾಗಿದೆ.ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಹಳದಿ ಮಾರ್ಗ ಪ್ರಮುಖ ಮೆಟ್ರೋ ಕಾರಿಡಾರ್ ಆಗಿದ್ದು, ದಕ್ಷಿಣ ಬೆಂಗಳೂರನ್ನು ಎಲೆಕ್ಟ್ರಾನಿಕ್ ಸಿಟಿಯೊಂದಿಗೆ ಸಂಪರ್ಕಿಸುತ್ತದೆ.
ಟ್ರ್ಯಾಕ್ನಲ್ಲಿ ಚಲಿಸುವ ಮೊದಲು ಕೆಲವೊಂದು ಪರೀಕ್ಷೆಗಳನ್ನು ನಡೆಸಬೇಕಿದೆ. ಇದಾದ ಬಳಿಕ ಟ್ರ್ಯಾಕ್ನಲ್ಲಿ 15 ಪರೀಕ್ಷೆಗಳನ್ನು ಮಾಡಬೇಕಿದೆ. ನಂತರ ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ, ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿಯಿಂದ ಅನುಮೋದನೆ ಅಗತ್ಯವಿದೆ.
ಒಟ್ನಲ್ಲಿ ಬೆಂಗಳೂರಿನ ಮೆಟ್ರೋವನ್ನು ಮತ್ತಷ್ಟು ವಿಸ್ತಾರವಾಗಿ ನಿರ್ಮಾಣ ಮಾಡಲು ಮೆಟ್ರೋ ಸಂಸ್ಥೆ ಮುಂದಾಗಿದೆ.. ತಂತ್ರಜ್ಞಾನ ಜೊತೆಗೆ ಇತರೆ ದೇಶದ ಸಹಾಯ ಪಡೆದು ನಮ್ಮ ಬೆಂಗಳೂರನ್ನು ಮತ್ತಷ್ಟು ಬೆಳವಣಿಗೆ ಮಾಡಲು ಮುಂದಾಗಿರುವುದು ಖುಷಿಯ ವಿಚಾರ..