ಬೆಂಗಳೂರು:- ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೊಸವರ್ಷದಿಂದ ರೈಲು ಅವಧಿ ವಿಸ್ತರಣೆ ಮಾಡಲಾಗಿದೆ.
ಮನೆಯಲ್ಲಿ ಸೊಳ್ಳೆ ಕಾಟವೇ? ಹಾಗಿದ್ರೆ ಬಾಳೆಹಣ್ಣಿನ ಸಿಪ್ಪೆಯನ್ನು ಹೀಗೆ ಬಳಸಿ, ಮನೆಯಲ್ಲಿ ಒಂದು ಸೊಳ್ಳೆ ಇರಲ್ಲ!
ಅಂದು ಮಧ್ಯರಾತ್ರಿ ತನಕ ಮೋಜು ಮಸ್ತಿ ನಡೆಯುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 31 ರ ಮಧ್ಯರಾತ್ರಿಯಿಂದ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಲಾಗಿದೆ.
ರಾತ್ರಿ ಇಡೀ ಪಾರ್ಟಿ ಮಾಡಿ ಮನೆ ಸೇರಿಕೊಳ್ಳಲು ಪ್ರಯಾಣಿಕರ ಅನುಕೂಲಕ್ಕಾಗಿ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ರಾತ್ರಿ 11ರಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರಲಿದ್ದು, ಜನವರಿ 1ರಂದು ಮುಂಜಾನೆ 2 ಗಂಟೆಗೆ ಎಲ್ಲ ಮೆಟ್ರೋ ಟರ್ಮಿನಲ್ನಿಂದ ಕೊನೆ ರೈಲು ಹೊರಡಲಿದೆ. ಆದ್ರೆ, ಮೆಜೆಸ್ಟಿಕ್ನಿಂದ ಮುಂಜಾನೆ 2.40ಕ್ಕೆ ಕೊನೆ ರೈಲು ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಪೇಪರ್ ಟಿಕೆಟ್ ವ್ಯವಸ್ಥೆ
ಇನ್ನು ಬಿಗ್ರೇಡ್ ರೋಡ್ನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿಕೊಂಡು ಎಲ್ಲರೂ ಒಟ್ಟೊಟ್ಟಿಗೆ ತಮ್ಮ ತಮ್ಮ ವಾಸಸ್ಥಳಕ್ಕೆ ತೆರಳು ಎಂಜಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಾರೆ. ಹೀಗಾಗಿ ಭಾರೀ ಜನಸಂದಣಿಯಾಗಲಿದೆ. ಹೀಗಾಗಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಡಿಸೆಂಬರ್ 31ರ ರಾತ್ರಿ 11 ಗಂಟೆಯ ನಂತರ ಪ್ರವೇಶ ಹಾಗೂ ನಿರ್ಗಮನ ದ್ವಾರ ಬಂದ್ ಆಗಲಿವೆ. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಕರಿಗೆ ಮೆಟ್ರೋ ಸೇವೆ ಲಭ್ಯವಾಗಲಿದ್ದು, ಮುಂಗಡವಾಗಿ ಅಂದು ರಿಟರ್ನ್ ಹೋಗಲು ಐವತ್ತು ರುಪಾಯಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.
ಟಿಕೆಟ್ ಪಡೆದುಕೊಳ್ಳಲು ನೂಕುನುಗ್ಗಲು ಆಗುವುದರಿಂದ ಈ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಬೇಗ ಬೇಗ ಹರಿದು ಕೊಡಬಹುದು. ಯಾವುದೇ ಸ್ಕ್ಯಾನ್ ಮಾಡುವ ತಾಪತ್ರಯ ಇರುವುದಿಲ್ಲ. ಇದರಿಂದ ಜನಸಂದಣೆಯೂ ಆಗುವುದಿಲ್ಲ.