ಬೆಂಗಳೂರು:- ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾತ್ರಿ 2 ಗಂಟೆ ವರೆಗೆ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆ ವ್ಯವಸ್ಥೆ ಕಲ್ಪಿಸಲಾಗಿದೆ.
ಹಾವೇರಿ: ನಡುರಸ್ತೆಯಲ್ಲೇ ಸ್ಕಾರ್ಪಿಯೋ ಕಾರು ಬೆಂಕಿಗಾಹುತಿ! ತಪ್ಪಿದ ದುರಂತ!
ಬೆಂಗಳೂರಿನ ವಿವಿಧ ಭಾಗಗಳಿಂದ ರಾತ್ರಿ ಎರಡು ಗಂಟೆವರೆಗೆ ಹೆಚ್ಚುವರಿ ಬಸ್ಸುಗಳು ಸಂಚಾರ ಮಾಡಲಿವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಬನಶಂಕರಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಮಧ್ಯೆ, ನಮ್ಮ ಮೆಟ್ರೋ ಕೂಡ ಹೊಸ ವರ್ಷಾಚರಣೆ ಸಂದರ್ಭ ಪ್ರಯಾಣಿಕರ ನಿರ್ವಹಣೆಗೆ ಒಂದಷ್ಟು ತಯಾರಿ ಮಾಡಿಕೊಂಡಿದೆ. ಸಂಭ್ರಮದಲ್ಲಿ ಕುಡಿದು ಹುಚ್ಚಾಟ ಆಡುವವರ ಬಗ್ಗೆಯೂ ಹದ್ದಿನ ಕಣ್ಣಿಡುವ ಮೂಲಕ ಅಂಥವರ ಆಟಾಟೋಪಕ್ಕೆ ಬ್ರೇಕ್ ಹಾಕಲು ಬೇಕಾದ ತಯಾರಿ ಮಾಡಿಕೊಂಡಿದೆ. ಡಿಸೆಂಬರ್ – 31 ರ ರಾತ್ರಿ ಮದ್ಯಪಾನ ಮಾಡಿ ಬರುವ ಪ್ರಯಾಣಿಕರಿಗೆ ಈ ಬಾರಿ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಎಂಆರ್ಸಿಎಲ್ ಹೇಳಿದೆ.