ರಾಜಕಾರಣದಿಂದ ಅಲ್ಪ ವಿರಾಮ ಪಡೆದುಕೊಂಡು ಸಿನಿಮಾ ರಂಗದಲ್ಲಿ ಸಕ್ರೀಯರಾಗಿರುವ ನಿಖಿಲ್ ಕುಮಾರಸ್ವಾಮಿ ಈಗಾಗಲೇ ಒಂದು ಸಿನಿಮಾ ಮಾಡುತ್ತಿದ್ದಾರೆ. ಇದೇ ಸಿನಿಮಾದ ಚಿತ್ರೀಕರಣದಲ್ಲೂ ಅವರು ಬ್ಯುಸಿಯಾಗಿದ್ದಾರೆ. ಈ ನಡುವೆ ಮತ್ತೊಂದು ಸಿನಿಮಾವನ್ನು (New Movie) ನಿಖಿಲ್ ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾವನ್ನು ಅವರದ್ದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ (Duniya Vijay) ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.