ಬೆಂಗಳೂರು: ಮುಖ್ಯಮಂತ್ರಿಗಳವರ ಒಂದು ಲಕ್ಷ ಮನೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ (BJP Government) ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ವಿಶೇಷತೆಗಳೇನು ಗೊತ್ತಾ? ಇಲ್ಲಿದೆ ಫುಲ್ ಡಿಟೇಲ್ಸ್!
ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ನೇತೃತ್ವದಲ್ಲಿ ಸಿಎಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ ರೂ., ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ ರೂ., ಎಸ್ಸಿ-ಎಸ್ಟಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು. ನಂತರ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್ಟಿ ಸೇರಿ ಸೇರಿ 11.20 ಲಕ್ಷ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.