ಪ್ರಜ್ವಲ್ ದೇವರಾಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ನವೆಂಬರ್ 29ಕ್ಕೆ ಪ್ರಜ್ವಲ್ ನಟನೆಯ ಮಾಫಿಯಾ ಸಿನಿಮಾದ ಟೀಸರ್ (Teaser) ರಿಲೀಸ್ ಆಗಲಿದೆ. ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ (Aditi Prabhudeva) ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಮಾಫಿಯಾ (Mafia) ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ (Dubbing) ಕಾರ್ಯ ಮುಕ್ತಾಯವಾಗಿದೆ.
ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.