ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಆರ್ಸಿಬಿ ಸೇರಿದಂತೆ ಎಲ್ಲಾ ತಂಡಗಳು ಸಮರಭ್ಯಾಸವನ್ನು ಶುರು ಮಾಡಿದೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಹುತೇಕ ಆಟಗಾರರು ಈಗಾಗಲೇ ಕ್ಯಾಂಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ಕ್ಕೆ ಕೌಂಟ್ಡೌನ್ ಶುರುವಾಗಿದೆ. ಆರ್ಸಿಬಿ ಫ್ಯಾನ್ಸ್ಗೆ ಫ್ರಾಂಚೈಸಿಗಳು ಗುಡ್ನ್ಯೂಸ್ ಕೊಟ್ಟಿದೆ. ಹೌದು,ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್ ಆಟಗಾರರು ತಂಡಕ್ಕೆ ಎಂಟ್ರಿ ನೀಡಿದ್ದಾರೆ. ರಾಜನ್ ಕುಮಾರ್ ಹಾಗೂ ಯಶ್ ದಯಾಳ್ ಆರ್ಸಿಬಿ ತಂಡವನ್ನ ಸೇರಿಕೊಂಡಿದ್ದಾರೆ. ಆರ್ಸಿಬಿ ಈಗಾಗ್ಲೆ ತವರಿನ ಅಂಗಳದಲ್ಲಿ ಅಭ್ಯಾಸ ಆರಂಭಿಸಿದೆ.
ಒಂದು ಕಾಲದಲ್ಲಿ ಕೊತ್ತಂಬರಿ ಸೊಪ್ಪು ಮಾರುತ್ತಿದ್ದ ವ್ಯಕ್ತಿ ಈಗ ಬಾಲಿವುಡ್ ಸ್ಟಾರ್ ನಟ..!
ವೇಗಿ ಯಶ್ ದಯಾಳ್ ಹಾಗೂ ರಾಜನ್ ಕುಮಾರ್ ಮೊದಲ ಬಾರಿ ಆರ್ಸಿಬಿ ಪರ ಆಡುತ್ತಿದ್ದಾರೆ. ಇನ್ನೊಂದೆಡೆ ವಿರಾಟ್ ಕೊಹ್ಲಿಯ ಕಮ್ಬ್ಯಾಕ್ ಯಾವಾಗ? ಅಭಿಮಾನಿಗಳ ವಲಯದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕೇ ಬಿಟ್ಟಿದೆ. ಕೊಹ್ಲಿ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದು, ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.