ನವದೆಹಲಿ:- ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರದಿಂದ ಇನ್ಮುಂದೆ 5 ಲಕ್ಷದವರೆಗೆ ಚಿಕಿತ್ಸೆ ಫ್ರೀ ಸಿಗಲಿದೆ.
ಆಯುಷ್ಮಾನ್ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಮೋದಿ ಸರ್ಕಾರ ಕ್ಯಾಬಿನೆಟ್ನಲ್ಲಿ ಅನುಮೋದನೆ ನೀಡಿದೆ.
ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಒದಗಿಸಬೇಕು: ಸಿಎಂ ಗೆ ಈಶ್ವರ್ ಖಂಡ್ರೆ ಮನವಿ!
ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, “70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನು ಆಯುಷ್ಮಾನ್ ಭಾರತ್ ಕಾರ್ಯಕ್ರಮದೊಳಗೆ ತರಲು ಮೋದಿ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಹೀಗಾಗಿ ಭಾರತದ 6 ಕೋಟಿ ಹಿರಿಯ ನಾಗರಿಕರು ಇದರಿಂದ ಪ್ರಯೋಜನವಾಗಲಿದೆ ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ನಮ್ಮ ಸರ್ಕಾರದ ಈ ನಿರ್ಧಾರದಿಂದಾಗಿದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಬರೋಬ್ಬರಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆಯುತ್ತಾರೆ ಎಂದರು. ಜೊತೆಗೆ ಈ ಯೋಜನೆಯನ್ನು ದೇಶದ ಸುಮಾರು 6 ಕೋಟಿ ಹಿರಿಯ ನಾಗರಿಕರನ್ನು ಒಳಗೊಂಡಿರುವ 4.5 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿವೆ ಎಂದು ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಈ ಕಾರ್ಯಕ್ರಮಕ್ಕೆ 3437 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.