ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ’ ಎಂದು ತಿಳಿಸಿದರು.
ಹಿಂದಿನ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 13,353 ಮಂದಿ ಅರ್ಹತೆ ಪಡೆದಿದ್ದರು. ಇದರಲ್ಲಿ ಪ್ರಮಾಣಪತ್ರ ವಿತರಣೆ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ಪ್ರಮಾಣಪತ್ರ ವಿತರಣೆ ಮಾಡಬೇಕಿದೆ. ಪ್ರಕರಣವು ಸುಪ್ರೀಂಕೋರ್ಟ್ನಲ್ಲಿ ಇರುವುದರಿಂದ ಉಳಿದ ಅಭ್ಯರ್ಥಿಗಳಿಗೆ ಇನ್ನಷ್ಟೇ ಪ್ರಮಾಣಪತ್ರ ವಿತರಣೆ ಮಾಡಬೇಕಿದೆ. ಸುಪ್ರೀಂಕೋರ್ಟ್ ಮತ್ತು ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.