ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ಟೀಂ ಇಂಡಿಯಾ ಆಸ್ಟ್ರೇಲಿಯಾ ಮಹತ್ವದ ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಲಭ್ಯರಾಗಲಿದ್ದಾರೆ. ಶಮಿ ಪ್ರಸ್ತುತ ಭಾರತದಲ್ಲಿದ್ದಾರೆ, ಆದರೆ ಅವರ ಪ್ಲೇಯಿಂಗ್ ಕಿಟ್ ಅನ್ನು ಈಗಾಗಲೇ ಆಸ್ಟ್ರೇಲಿಯಾಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಹೆಂಗಸರಿಗೆ ಕೊಟ್ಟ ಹಾಗೆ ಗಂಡಸರಿಗೂ ಫ್ರೀ ಬಸ್ ಟಿಕೆಟ್ ಕೊಟ್ರೆ KSRTC ಮುಚ್ಚಬೇಕಾಗತ್ತೆ: CM ಸಿದ್ದರಾಮಯ್ಯ!
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಮೊಹಮ್ಮದ್ ಶಮಿ ಆಡುವುದನ್ನು ಕಾಣಬಹುದು. ಪಿಟಿಐ ವರದಿ ಮಾಡಿರುವ ಪ್ರಕಾರ, ಮೊಹಮ್ಮದ್ ಶಮಿ ಅವರ ಪ್ಲೇಯಿಂಗ್ ಕಿಟ್ ಈಗಾಗಲೇ ಆಸ್ಟ್ರೇಲಿಯಾವನ್ನು ತಲುಪಿದ್ದು, ಎನ್ಸಿಎ ವೈದ್ಯಕೀಯ ತಂಡದಿಂದ ಫಿಟ್ನೆಸ್ ಕ್ಲಿಯರೆನ್ಸ್ ಪಡೆದ ಕೂಡಲೇ ಶಮಿ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಂದರೆ ಬಿಸಿಸಿಐ ಶೀಘ್ರದಲ್ಲೇ ಶಮಿಯನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲಿದೆ.
ಡಿಸೆಂಬರ್ 14 ರಿಂದ ಬ್ರಿಸ್ಬೇನ್ನಲ್ಲಿ ಪ್ರಾರಂಭವಾಗುವ ಮೂರನೇ ಟೆಸ್ಟ್ನಲ್ಲಿ ಮೊಹಮ್ಮದ್ ಶಮಿ ಆಡುವ ಸಾಧ್ಯತೆಗಳು ತೀರ ಕಡಿಮೆ. ಏಕೆಂದರೆ ಈ ಪಂದ್ಯಕ್ಕೆ ಹೆಚ್ಚು ಸಮಯ ಉಳಿದಿಲ್ಲ. ಆದರೆ ಶಮಿ ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ತಂಡದ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಎನ್ಸಿಎಯಿಂದ ಫಿಟ್ನೆಸ್ ಪ್ರಮಾಣಪತ್ರವನ್ನು ಶೀಘ್ರದಲ್ಲೇ ಸ್ವೀಕರಿಸಲಾಗುವುದು ಎಂದು ಶಮಿ ಆಪ್ತ ಮೂಲಗಳು ಪಿಟಿಐಗೆ ತಿಳಿಸಿವೆ.