ರಜನಿಕಾಂತ್ ಹೊಸ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಇವರ 170ನೇ ಚಿತ್ರಕ್ಕೆ ‘ವೇಟ್ಟೈಯನ್’ (Vettaiyan) ಎಂದು ಹೆಸರಿಡಲಾಗಿದ್ದು, ರಜನಿ ಸಖತ್ ಮಾಸ್ ಫೀಲ್ ಕೊಡುವಂತಹ ಪಾತ್ರ ಮಾಡಲಿದ್ದಾರೆ ಎನ್ನುವ ಸುಳಿವು ಸಿಕ್ಕಿದೆ. ಟೈಟಲ್ ಜೊತೆಗೆ ಒಂದು ಸಣ್ಣ ವಿಡಿಯೋ ತುಣುಕೊಂದನ್ನೂ ರಿಲೀಸ್ ಮಾಡಲಾಗಿದೆ.
ನಾನಾ ಕಾರಣಗಳಿಂದ ಈ ಚಿತ್ರ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ನಟಿಸಲಿದ್ದಾರೆ. ಹಲವು ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ. ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ
ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್ಡೌನ್ ಶುರುವಾಗಿದೆ.