ಸೆಪ್ಟೆಂಬರ್ ತಿಂಗಳಿನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಪಿಎಂ ಕಿಸಾನ್ 18ನೇ ಕಂತು ಈ ದಿನಾಂಕದಂದು ಬಿಡುಗಡೆ: ಫಲಾನುಭವಿಗಳು ಹೀಗೆ ಪರಿಶೀಲಿಸಿ!
ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿ ಇರುವ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿದ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ಥಿ ಇನ್ನೂ ಕೂಡ ಆಗಿಲ್ಲ.
ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ, ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ” ಎಂದು ಭರವಸೆ ನೀಡಿದರು.
“ರೈತರಿಗೆ ಜಮೀನು ಮಂಜೂರಾಗಿದ್ರೂ ‘ಪೋಡಿ’ ಅಭಿಯಾನಯನ್ನು ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ರೆ ಅದಕ್ಕಿಂತ ಹೆಚ್ಚಿನ ವಿಸ್ತೀಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದ್ರೆ, ಕೆಲವು ಸಂದರ್ಭದಲ್ಲಿ ಸಾಗುವಳಿಯನ್ನು ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದ್ರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರವಾದ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.