ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಳೆದೆರಡು ತಿಂಗಳಿಂದ ಕಾಯ್ತಿರುವ ಮನೆಯೊಡತಿಯರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ.
ಆಗಸ್ಟ್ ಮೊದಲ ವಾರ ಜೂನ್ ಮತ್ತು ಜುಲೈ ತಿಂಗಳ ಹಣಒಟ್ಟಿಗೆ ಜಮಾ ಆಗಲಿದೆ ಎಂದು ಮಾಹಿತಿ ನೀಡಿದೆ.ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದ್ದು ಇನ್ನೆರಡು ದಿನಗಳಲ್ಲಿ ಸರಿಯಾಗಿ ಆಗಸ್ಟ್ ಮೊದಲ ವಾರವೇ ಸರ್ಕಾರ ಖಾತೆಗೆ ಹಣ ಜಮಾ ಮಾಡಲಿದೆ ಎಂದು ವರದಿಯಾಗಿದೆ
ಇಂದು ನಟ ದರ್ಶನ್ ಮನೆ ಊಟದ ಅರ್ಜಿ ವಿಚಾರಣೆ! ಇಂದಾದ್ರೂ ಸಿಗುತ್ತಾ ಭಾಗ್ಯ !
ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.