ಬೆಂಗಳೂರು:- ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪಾರ್ಕ್ಗಳ ಸಮಯ ವಿಸ್ತರಣೆ ಮಾಡಲಾಗಿದೆ.
ಇನ್ನು ಮುಂದೆ ಪ್ರತಿದಿನ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಡಿಸಿಎಂ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿಗೆ ರಾಹುಲ್ ಗಾಂಧಿ ದಿಢೀರ್ ಎಂಟ್ರಿ.. ಏರ್ಪೋರ್ಟ್ ನಲ್ಲಿ ಸ್ವಾಗತಿಸಿದ ಸಿದ್ದು, ಡಿಕೆಶಿ!
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ನಿರ್ವಹಣೆ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ನಿನ್ನೆ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು. ಈ ವೇಳೆ ಪಾರ್ಕ್ ಗಳ ಸಮಯ ವಿಸ್ತರಣೆ ಬಗ್ಗೆ ಮಾಹಿತಿ ನೀಡಿದರು.
ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್ಗಳು ತೆರೆದಿರುತ್ತಿತ್ತು. ಬಳಿಕ ಮಧ್ಯಾಹ್ನ 1:30ರಿಂದ ರಾತ್ರಿ 8ರ ತನಕ ಪಾರ್ಕ್ಗಳನ್ನು ತೆರೆಯಲು ಅವಕಾಶ ಇತ್ತು. ಈಗ ನಾಗರಿಕರ ಒತ್ತಾಯದ ಮೇರೆಗೆ ಪಾರ್ಕ್ ತೆರೆಯುವ ಸಮಯ ಹೆಚ್ಚಳ ಮಾಡಿದ್ದೇವೆ. ಪಾರ್ಕ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇರುತ್ತೆ, ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ಆದ್ರೆ, ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.