ಬೆಂಗಳೂರು:- ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ ನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರು ಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
Bommai: ಮೋದಿ ಅಭಿವೃದ್ಧಿ ಅರ್ಥ ಮಾಡಿಕೊಳ್ಳಲು ಕಾಂಗ್ರೆಸ್’ಗೆ 10 ವರ್ಷ ಬೇಕು: ಬೊಮ್ಮಾಯಿ
ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವ ಪೋರ್ಟಲ್ ಸುಮಾರು ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದು, ಜೂನ್ 4ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಜೂನ್ ಮೊದಲ ವಾರ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.
ಲಕ್ಷಾಂತರ ಮಂದಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ.